ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಕರಗಾಂವ ಹಾಗೂ ಸರ್ಕಾರಿ ಪ್ರೌಢ ಶಾಲೆ ಕರಗಾಂವ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30 ಅಕ್ಟೋಬರ್ 2024 ರಂದು "ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆ ಕೌಶಲ್ಯಗಳು" ಎಂಬ ವಿಷಯದ ಮೇಲೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ
ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಶೋಧನಾರ್ಥಿ ಭೈರಪ್ಪ ಹಾಲಪ್ಪಗೋಳ ಮಾತನಾಡಿ ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯಕ್ಕೆ ಪ್ರತಿಯೊಬ್ಬರೂ ಕಾಳಜಿವಹಿಸಬೇಕು ಎಂದರು. ಮಾನಸಿಕ ಸ್ವಾಸ್ಥ್ಯ ಕ್ಕಾಗಿ ವಿವಿಧ ಕೌಶಲ್ಯಗಳನ್ನು ರೂಡಿಸಿಕೊಳ್ಳುವುದು ಅಗತ್ಯವಿದೆ ಎಂದರು.
ಕಾರ್ಯಕ್ರಮದ ಅತಿಥಿಗಳಾದ ಕರಗಾಂವದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಶ್ರೀ ಎಮ್ ಜಿ ಖಿಲಾರೆರವರು ಮಾನಸಿಕ ಆರೋಗ್ಯದ ವೃದ್ಧಿಗೆ ವಹಿಸಬೇಕಾದ ಕ್ರಮ ಮತ್ತು ಆರೋಗ್ಯಕರ ಜೀವನ ಶೈಲಿಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸರ್ಕಾರಿ ಪ್ರೌಡಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಎಸ್. ಬಿ. ಕಮತೆ ಮಾತನಾಡಿ ಪ್ರೌಢಶಾಲಾ ವಿದ್ಯಾರ್ಥಿಗಳ ಪರೀಕ್ಷಾ ಒತ್ತಡದ ಸನ್ನಿವೇಶದಲ್ಲಿ ಇಂತಹ ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆ ಕೌಶಲ್ಯಗಳ ಜಾಗೃತಿ ಕಾರ್ಯಕ್ರಮದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಗಾಂವದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಡಿ. ಎಸ್ ಬಹದ್ದೂರಿ,ಪ್ರೌಢಶಾಲೆಯ ಸಹಶಿಕ್ಷಕರಾದ ಶ್ರೀ ಎಮ್. ಬಿ. ಕಾಮಗೌಡ, ಗೀತಾ ಮಠಪತಿ, ರತ್ನಪ್ರಭಾ ಕರನಿಂಗ, ರೇಖಾ ಬಿದರಳ್ಳಿ, ರೂಪಾ ಬಬಲೇಶ್ವರ, ಗ್ರಾಮಸ್ಥರಾದ ಭೀಮಸೇನ ಕಾಂಬಳೆ, ವಿದ್ಯಾರ್ಥಿಗಳು ಸೇರಿ ಹಲವರು ಉಪಸ್ಥಿತರಿದ್ದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಎಮ್ ಎಸ್ ಡಬ್ಲ್ಯೂ ವಿದ್ಯಾರ್ಥಿ ಮಂಜುನಾಥ ದಲಾಲ ನಿರೂಪಿಸಿದರು, ಆದರ್ಶ ಕೋಷ್ಟಿ ಸ್ವಾಗತಿಸಿದರು ಹಾಗೂ ಪ್ರಮೋದ ಕುದುರೆ ವಂದಿಸಿದರು.
No comments:
Post a Comment